
ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲ್ಲ. ಪಕ್ಷೇತರವಾಗಿ ನಿಲ್ಲುತ್ತೇನೆ. ಈ ಕ್ಷಣಕ್ಕೂ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದಲ್ಲಿ ಪಕ್ಷೇತರ ಸ್ಪರ್ಧೆ ಮಾಡುವೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದ್ದು, ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಯಾರಿಗೆ ಟಿಕೆಟ್ ನೀಡಬೇಕು ಎಂಬ ಕಸರತ್ತಿನಲ್ಲಿ ತೊಡಗಿವೆ.
ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಈ ಕಾರಣ ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದಾರೆ.