ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನು ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿ, ಎಲ್ಲಾ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನ್ನಿಸ್, ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ್, ರೂಪಿಣಿ ಮಂಜುನಾಥ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮನು, ಮುಖಂಡರಾದ ಆನಂದ್, ಅಜಯ್, ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.