
ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು, ಸೆಕ್ಷನ್ 4 ರ ಅಡಿಯಲ್ಲಿ 24 ಪ್ರಕರಣಗಳನ್ನು ದಾಖಲಿಸಿ 4950 ರೂಪಾಯಿ ದಂಡವನ್ನು ಸಂಗ್ರಹಿಸಲಾಗಿದೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಪೋಲಿಸ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.