ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೊರೊನಾ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ಏರಿಕೆಯಾಗಿದೆ. ಗುರುವಾರ 5,335 ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಇಂದು ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ದೇಶದಲ್ಲಿ ಈವರೆಗೆ 4,41,85,858 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ.