ಬೆಂಗಳೂರು ಉತ್ತರ ವಲಯ, ನಾಗಸಂದ್ರ ಅಂಚೆ ವ್ಯಾಪ್ತಿಯ ದೊಡ್ಡಬಿದರಕಲ್ಲಿನ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿ ಮತ್ತು ಯೂತ್ ಫಾರ್ ಸೇವಾ ಸಂಸ್ಥೆಯ ಸಹಯೋಗದಲ್ಲಿ ಸುಮಾರು 200 ಮಕ್ಕಳಿಗೆ ಸ್ಪೋರ್ಟ್ಸ್ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ವೇಳೆ ಯೂತ್ ಫಾರ್ ಸೇವಾದ ವಿಷ್ಣು, ನಾಗರಾಜ್, ಸುನಿತಾ ಹಾಗೂ ಶಾಲಾ ಮುಖ್ಯೋಪಾಧ್ಯಾಯ, ಸಹ ಶಿಕ್ಷಕರು ಹಾಜರಿದ್ದರು.