ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಟು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್.ಚಂದ್ರಶೇಖರ್ ತಿಳಿಸಿದರು.
ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ಸಾಕಷ್ಟು ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ ಉತ್ತಮ ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು.
ಅತಿಯಾದ ಆಸೆ ಚಿಂತೆಯೂ ಸಹ ಮಾನವನ ಆಕಾಂಕ್ಷೆಗಳಲಿಂದಲೂ ಕೂಡ ಮಾನಸಿಕ ಖಿನ್ನತೆಗಳಿಗೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ಗ್ರಾಮೀಣ ಪ್ರದೇಶದಲ್ಲಿ ನವೋದಯ ಚಾರಿಟೇಬಲ್ ಅಧ್ಯಕ್ಷರಾದ ಚೇತನ್ ಮತ್ತು ಅವರ ತಂಡ ಗ್ರಾಮೀಣ ಆರೋಗ್ಯ ಅಧ್ಯಯನ ಕೇಂದ್ರವನ್ನು ತೆರೆದಿರುವುದು ಬಹಳ ಸಂತೋಷದ ವಿಷಯ ಎಂದರು.
ಈ ಕಾರ್ಯಕ್ರಮದಲ್ಲಿ ಸುರಾನ ಕಾಲೇಜು ಮುಖ್ಯಸ್ಥರಾದ ಡಾ. ಸುದರ್ಶನ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ್ವರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಪೂರ್ಣಿಮಾ.ಗ್ರಾಮ ಪಂಚಾಯಿತಿ ಸದಸ್ಯರಾದ ಶ್ವೇತ ಮುನಿಶಾಮಿಗೌಡ,
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿಗಳಾದ ಚಂದ್ರಶೇಖರ್ ಎಂಪಿಸಿಎಸ್ ಅಧ್ಯಕ್ಷರಾದ ಚೊಕ್ಕರೆಡ್ಡಿ ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್ .ವೈ.ಟಿ. ಕಾರ್ತಿಕ್ ಗೌಡ, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸುರನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.