ದೊಡ್ಡಬಳ್ಳಾಪುರ: ತಾಲೂಕಿನ ಶ್ರೀ ಘಾಟಿ ಸಮೀಪದ ಆಶ್ರಮದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ವ್ಯಕ್ತಿ ಸಾವನ್ನಪ್ಪಿ ಹಲವು ದಿನಗಳಾಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ದುರ್ವಾಸನೆ ಬೀರುತ್ತಿದ್ದು, ಇದೂವರೆಗೂ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸ್ ದೌಡಾಯಿಸಿ ಪರಿಶೀಲನೆ ನಡೆಸಿ ಮೃತ ಶವವನ್ನು ಆಂಬುಲೆನ್ಸ್ ಮೂಲಕ ಶವಗಾರಕ್ಕೆ ರವಾನಿಸಲಾಗಿದೆ.
ಹತ್ಯೆಯೋ ಅಥವಾ ಆತ್ಮಹತ್ಯೆಯೋ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ