ಎಸ್.ಎನ್ ಗೆ ಸಚಿವ ಸ್ಥಾನಕ್ಕೆ ಯುವ ಸೇನೆ ನವೀನ್ ಒತ್ತಾಯ

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮುಂದೆ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್ ಯುವ ಸೇನೆ ಜಿಲ್ಲಾ ಅಧ್ಯಕ್ಷ ತುಮಟಗೆರೆ ನವೀನ್ ಗೌಡ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಸ್.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ಜಿಲ್ಲೆಯಲ್ಲಿ ಗೆದ್ದಿರುವ ನಾಲ್ಕು ಸ್ಥಾನಗಳಲ್ಲಿ ಹಿರಿಯ ಶಾಸಕರಾಗಿದ್ದಾರೆ ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪ್ರಸ್ತುತ ಹಣಕಾಸು ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ಇವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು ದಲಿತ ಸಮುದಾಯಗಳಿಂದ ಪ್ರತಿನಿಧಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 136 ಸ್ಥಾನಗಳನ್ನು ಪಡೆದಿದ್ದ ಸಂದರ್ಭದಲ್ಲಿ ಸರಕಾರ ರಚನೆಯಲ್ಲಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು ಆದರೆ ಮೊದಲ ಸಚಿವ ಸಂಪುಟದ ರಚನೆಯಲ್ಲಿ ಹಿರಿಯರಿಗೆ ಅವಕಾಶ ನೀಡಲಾಗುತ್ತದೆ ಮುಂದೆ ನಡೆಯವ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಶ್ವಾಸನೆ ನೀಡಿದ್ದರಿಂದ ಹಿಂದೆ ಸರಿದಿದ್ದು ಈ ಬಾರಿಯ ದಲಿತ ಕೋಟಾ ಹಾಗೂ ಜಿಲ್ಲೆಯ ಹಿರಿತನದ ಆಧಾರದಲ್ಲಿ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಹೊಂದುವಂತೆ ಮಾಡುವಂತೆ ಮಾಡಲಿದ್ದು ಇಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಿದ್ದಾರೆ. ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಜನಾನುರಾಗಿ ಆಗಿರುವ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್ ಎನ್ ನಾರಾಯಣಸ್ವಾಮಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದಾಗಿ ಸತತವಾಗಿ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಜಿಲ್ಲೆಯಲ್ಲಿ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ ಯಾವುದೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೊಡ್ಡ ಶಕ್ತಿಯಾಗಿ ನಿಂತಿದ್ದು ಪಕ್ಷದ ಹೈಕಮಾಂಡ್ ಜನಪರ ಸೇವೆ ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!