ರಾಗಿ ಖರೀದಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೊದಾಮು ಇಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4290 ರೂಪಾಯಿ, ಪ್ರತಿ ಕ್ವಿಂಟಾಲ್ ಬಿಳಿ ಜೋಳ ಹೈಬ್ರಿಡ್ ಧಾನ್ಯ ಕ್ಕೆ 3371 ರೂಪಾಯಿ, ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2300 ರೂಪಾಯಿ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ರಾಗಿ ಗರಿಷ್ಠ 20.00 ಕ್ವಿಂಟಾಲ್‌, ಬಿಳಿ ಜೋಳ ಹೈಬ್ರಿಡ್ 150 ಕ್ವಿಂಟಾಲ್, ಭತ್ತ ಸಾಮಾನ್ಯ 50 ಕ್ವಿಂಟಾಲ್ ಖರೀದಿಸಲು ನಿಗದಿಪಡಿಸಲಾಗಿದೆ.

ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ ಒಂದು ಬಾರಿ ನೊಂದಣಿ ವೇಳೆಯಲ್ಲಿ ಇನ್ನೊಂದು ಬಾರಿ ಖರೀದಿ ವೇಳೆಯಲ್ಲಿ ಹಾಗಾಗಿ ನೊಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ. ನೊಂದಣಿಯಾದ ರೈತರಿಂದ ಮಾತ್ರ ರಾಗಿ ಖರೀದಿ ಮಾಡಲಾಗುವುದು. ಜನವರಿ ಮಾಹೆಯಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ ಮಾರ್ಚ್ 31 ಕ್ಕೆ ಅಂತ್ಯಗೊಳಿಸಲಾಗುವುದು ಎಂದರು.

ರೈತರು ಎಫ್.ಎಕ್ಯೂ ಗುಣಮಟ್ಟದ ರಾಗಿ, ಭತ್ತ, ಬಿಳಿ ಜೋಳವನ್ನು ಖರೀದಿ ಕೇಂದ್ರಗಳಿಗೆ ತರುವ ಮುನ್ನ ಸಮೀಪವಿರುವ ಖರೀದಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಬಯೋ ಮೆಟ್ರಿಕ್ ಮೂಲಕ ನೋಂದಣಿ ಮಾಡಿಸಬೇಕು.

ಕೃಷಿ ಇಲಾಖೆಯಿಂದ ರೈತರಿಗೆ ನೀಡಲಾಗಿರುವ “ಫೂಟ್ಸ್” ಐ.ಡಿ.(FRUITS) ಸಂಖ್ಯೆಯನ್ನು ಪಡೆದು ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳುವುದು. ಫೂಟ್ಸ್ ಐ.ಡಿ. ಇಲ್ಲದ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಇರುವುದಿಲ್ಲ ಹಾಗೂ ನೊಂದಾಣಿ ಸಮಯದಲ್ಲಿ ರೈತರು ತಮ್ಮ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ರೈತರು ಖರೀದಿ ಕೇಂದ್ರಕ್ಕೆ ಆಹಾರ ಧಾನ್ಯ ನೀಡಿ ಗ್ರೈನ್ ವೋಚರ್ ಪಡೆದ ನಂತರವೇ ಆಧಾರ್ ಕಾರ್ಡ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ಪಾವತಿಸಲಾಗುವುದು ಎಂದರು.

ಸಭೆಯಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಆಹಾರ ಇಲಾಖೆ ಉಪನಿರ್ದೇಶಕ ಶಂಕರ್ ಮೂರ್ತಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

*ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು*

*ದೇವನಹಳ್ಳಿ*
ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೋದಾಮು ವಿಜಯಪುರ ರಸ್ತೆ, ದೇವನಹಳ್ಳಿ ಟೌನ್.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

*ದೊಡ್ಡಬಳ್ಳಾಪುರ*
ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.

*ನೆಲಮಂಗಲ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.

Leave a Reply

Your email address will not be published. Required fields are marked *

error: Content is protected !!