ಇಂದು ಮುಂಜಾನೆ ತಾಲೂಕಿನ ಕೆಸ್ತೂರು ಗೇಟ್ ಬಳಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ.
ವಾಕಿಂಗ್ ಮಾಡಲೆಂದು ಬಂದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಹಾರಿ ಡಿವೈಡರ್ ಮೇಲೆ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಮೃತ ದುರ್ದೈವಿಯನ್ನು ಕೆಸ್ತೂರು ನಿವಾಸಿ 63 ವರ್ಷದ ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.