
ಕೋಲಾರ: ನಗರದ ನಚಿಕೇತನ ನಿಲಯದಲ್ಲಿ ಜೆಡಿಎಸ್ ಜಿಲ್ಲಾ ಎಸ್ಸಿ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಪರಿನಿರ್ವಾಣ ದಿನದ ಪ್ರಯುಕ್ತ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮಾತನಾಡಿ ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ ಅವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದ್ದಾರೆ ಅಂಬೇಡ್ಕರ್ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯುವ ಪೀಳಿಗೆಯ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಟಮಕ ಜಯಚಂದ್ರ, ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ನರಸಿಂಹಯ್ಯ, ಖಜಾಂಚಿ ಮುನಿಯಪ್ಪ, ಮುಖಂಡರಾದ ಹಾರೋಹಳ್ಳಿ ನಾಗರಾಜ್, ರಾಜಪ್ಪ, ಅಲೇರಿ ಮುನಿರಾಜು ಮುಂತಾದವರು ಇದ್ದರು.