
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ತಳಿರು ತೋರಣಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಯಿತು.
ಇಂದು ಮುಂಜಾನೆ 5:00 ಗಂಟೆಗೆ ಅಭಿಷೇಕ ಮತ್ತು ಮಹಾ ಮಂಗಳಾರತಿ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ದೇವರ ದರ್ಶನಕ್ಕೆಂದು ಸಾವಿರಾರು ಭಕ್ತರು ಆಗಮಿಸಿದ್ದರು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳು ನಾಗರಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲು ಮೊಸರು ತುಪ್ಪವನ್ನು ಹಾಕಿ ತಮ್ಮ ಹರಕೆಯನ್ನು ತೀರಿಸಿಕೊಂಡರು.

ಚಂಪಾ ಷಷ್ಠಿಯು ಈಶ್ವರ ಮತ್ತು ಸುಬ್ರಹ್ಮಣ್ಯನನ್ನು ಪೂಜಿಸುವ ಉತ್ಸವವಾಗಿರುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ, ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂಬ ನಂಬಿಕೆ ಇದೆ.

ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.