
ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು Arrest) ಬಂಧಿಸಿದ್ದರು. ಮಾತ್ರವಲ್ಲ ನಟನಿಗೆ 14 ದಿನ ನ್ಯಾಯಾಂಗ ಬಂಧವನ್ನೂ ವಿಧಿಸಲಾಗಿತ್ತು. ಆದರೀಗ ಅಲ್ಲು ಅರ್ಜುನ್‌ಗೆ ಕೋರ್ಟ್ ಜಾಮೀನು ನೀಡಿದೆ.
ಜೈಲಿಗೆ ಸೇರಿದ ತಕ್ಷಣವೇ ನಟನಿಗೆ ಜಾಮೀನು ಸಿಕ್ಕಿದೆ. ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮೃತ ರೇವತಿ ಅವರ ಪತಿ ಭಾಸ್ಕರ್ ನೀಡಿದ ದೂರಿನ ಮೇಲೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮೃತಳ ಪತಿ ಭಾಸ್ಕರ್ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಘಟನೆ ಸಂಭವಿಸುತ್ತದೆ. ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕರ ಸಂಬಂಧಿಸಿದಂತೆ ಅಲ್ಲು ಅರ್ಜುನ್‌ನನ್ನು ಇಂದು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಂಚಲಗುಡ ಜೈಲು ಪಾಲಾಗಲಿದ್ದರು. ಆದರೆ ಇದೀಗ ಕೋರ್ಟ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ.