ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ದೊಡ್ಡಬೆಳವಂಗಲ ವಲಯದ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ಮಾತನಾಡಿ, ಭಾರತ ವಿಶ್ವದಲ್ಲಿ ಅತೀ ಹೆಚ್ಚು ಯುವಕ ಯುವತಿಯರನ್ನು ಹೊಂದಿದ ದೇಶವಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಆತಂಕಕಾರಿ ಬೆಳವಣಿಗೆಯಾಗಿದೆ. ಮಹಾತ್ಮ ಗಾಂಧೀಜಿ ಅವರ ದುಶ್ಚಟ ಮುಕ್ತ ದೇಶದ ಕನಸು ನನಸು ಮಾಡುವ ನಿಟ್ಟಿನಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಅರಿವು ಕಾರ್ಯಕ್ರಮಗಳು ಅತಿ ಮುಖ್ಯವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಗೋವಿಂದರಾಜು ಮಾತನಾಡಿ, ಬೀಡಿ, ಸಿಗರೇಟು, ಗುಟ್ಕಾ, ಗಾಂಜಾ, ಅಫೀಮ್, ಮದ್ಯಸೇವನೆ ಸೇರಿ ಇನ್ನಿತರ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ ಎಂದರು.
ಕಾರ್ಯಕ್ರಮದಲ್ಲಿ ಮುನಿಕೃಷ್ಣಪ್ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸುಧಾ ಭಾಸ್ಕರ್ ತಾಲ್ಲೂಕು ಯೋಜನಾದಿಕಾರಿ ಅನ್ನಪೂರ್ಣ, ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.