ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಹಾದು ಹೋಗಿರುವ ದಾಬಸ್ ಪೇಟೆ- ಹೊಸಕೋಟೆ ಹೆದ್ದಾರಿಯಲ್ಲಿ ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಮತ್ತು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಶಾಲೆ ಬಿಟ್ಟಿದ್ದ ವೇಳೆ ಅಪಘಾತ ನಡೆದಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಕಾರ್ಮಿಕರಿಗೆ ಗಾಯಗಳಾಗಿವೆ.
ಗಾಯಾಳುಗಳಿಗೆ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.