ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆ‌ರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)

ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್‌ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

One thought on “ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *