ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಲಭಾಗದ ರಸ್ತೆಗೆ ಹೋಗಿ ಕಾರಿನ ಮೇಲೆ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)ಮೃತಪಟ್ಟವರು.
ಮೃತಪಟ್ಟವರು ವಿಜಯಪುರದ ಒಂದೇ ಫ್ಯಾಮಿಲಿ ಯವರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.