ಜಿಲ್ಲಾಡಳಿತ, ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50ಲಕ್ಷ ಮೊತ್ತದ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನಾಳೆ (ಡಿ.22)ರಂದು ಬೆಳಗ್ಗೆ 8ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪನವರು ತಾಲೂಕು ಪಂಚಾಯಿತಿ ಆವರಣದಲ್ಲಿ ನೆರವೇರಿಸಲಿದ್ದಾರೆ.
ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ..
ನಾಳೆ ದೊಡ್ಡಬಳ್ಳಾಪುರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪನವರು ಆಗಮಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ ಜಗನ್ನಾಥ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಲಿದ್ದಾರೆ.