
ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಘಟನೆ ತಾಲೂಕಿನ ಗೊಲ್ಲಹಳ್ಳಿ ತಾಂಡ ಸಮೀಪದ ಬೆಂಗಳೂರು-ಯಲಹಂಕ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಗೊಲ್ಲಹಳ್ಳಿ ತಾಂಡ ನಿವಾಸಿ ನಾಗರತ್ನಮ್ಮ(45), ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಗಾಯಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಲದಲ್ಲಿ ಹೂ ಕೀಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಗೌರಿಬಿದನೂರು ಕಡೆಯಿಂದ ಬಂದ ಕಾರು ಏಕಾಏಕಿ ಪಾದಚಾರಿಗಳ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ಕಾರಿನ ಚಾಲಕ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.