
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಡಿ.27) ರಜೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ.
ಅದೇರೀತಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ತಿಳಿದುಬಂದಿದೆ.