ರಾಜ್ಯದಲ್ಲಿ ಹೆಚ್.ಎಂ.ಪಿ.ವಿ ವೈರಸ್ ನ ಎರಡು ಪ್ರಕರಣ ಪತ್ತೆ- ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹೆಚ್.ಎಂ.ಪಿ.ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚೀನಾದಲ್ಲಿ ಹೆಚ್.ಎಂ.ಪಿ.ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!