
ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್’ನ ಹಿರಿಯ ಮುಖಂಡ, ಬೆ.ಗ್ರಾ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಡೊನಹಳ್ಳಿ ಅಪ್ಪಯ್ಯಣ್ಣ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಇಂದು (7-1-2025) ಮಧ್ಯಾಹ್ನ 3 ಗಂಟೆಗೆ ಆಗಮಿಸಿದ್ದರು.
ಮೊದಲು ದಿ. ಎಚ್ ಅಪ್ಪಯ್ಯಣ್ಣ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ನಂತರ ಮನೆಗೆ ಭೇಟಿಕೊಟ್ಟು ಅಪ್ಪಯ್ಯಣ್ಣ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.