ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ-ಹಿಂದೂಪುರ ಹೆದ್ದಾರಿಯ ಗೊಲ್ಲಹಳ್ಳಿ ಸಮೀಪದಲ್ಲಿ ನಡೆದಿದೆ.
ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ 31 ವರ್ಷದ ಯುವಕ ವೆಂಕಟೇಶ್ ಮೂರ್ತಿ ಹಾಗೂ ಮೋಕ್ಷಿತಾ (12) ಮಗು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತನ್ನ ತಂಗಿ ಮಗಳೊಂದಿಗೆ ಕೆಳಗಿನಜೂಗಾನಹಳ್ಳಿಯಿಂದ ದೊಡ್ಡಬಳ್ಳಾಪುರ ನಗರಕ್ಕೆ ಮೃತ ವೆಂಕಟೇಶ್ ಮೂರ್ತಿ ಹೋಗುತ್ತಿದ್ದರು. ಇದೇ ವೇಳೆ ಹಿಂದೂಪುರದಿಂದ ಬೆಂಗಳೂರಿಗೆ ಹೋಗಲು ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ ಆರ್ಟಿಸಿ ಬಸ್ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ವೆಂಕಟೇಶ್ ಮೂರ್ತಿ ಬಸ್ ಚಕ್ರದಡಿ ಸಿಲುಕಿ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 12ವರ್ಷದ ಹೆಣ್ಣು ಮಗುವಿಗೂ ತೀವ್ರ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.