ಬೆಳ್ಳಂಬೆಳಗ್ಗೆ ತಾಲೂಕಿನ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ

ಬೆಳ್ಳಂಬೆಳಗ್ಗೆ ತಾಲೂಕಿನ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆಯಾಗಿದೆ. ದಿಢೀರನೆ ಬಂದ ಮಳೆಗೆ ಜನ‌‌, ಜಾನುವಾರು ಕೆಲಕಾಲ ಪರಿತಪಿಸುವಂತಾಗಿತ್ತು.

ಸದ್ಯ ಮೋಡಕವಿದ ವಾತಾವಣರವಿದ್ದು, ಇನ್ನೂ ಜಡಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದನ ಕರುಗಳಿಗೆ ಕೂಡಿಟ್ಟ ಮೇವು ಮಳೆಗೆ ನೆನೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ರೈತರು ಜೋಳ, ರಾಗಿ ಹುಲ್ಲಿನ ಬಣವೆಗಳಿಗೆ ಟಾರ್ಪಲ್ ಹೊದಿಸಿ ಮಳೆಗೆ ನೆನೆಯದೇ ನೋಡಿಕೊಳ್ಳುತ್ತಿದ್ದಾರೆ.

ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ದಕ್ಷಿಣ ಭಾರತದ ರಾಜ್ಯಗಳ ಮೇಲೂ ಇದರ ಪರಿಣಾಮ ಕಂಡುಬಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

error: Content is protected !!