ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್.ಅನುರಾಧ ಅವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ ಅವರನ್ನು ಬೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.
ಡಾ.ಕೆ.ಎನ್.ಅನುರಾಧಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಇದರ ಜೊತೆಗೆ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಭಾರ ಜಿಲ್ಲಾಧಿಕಾರಿಯ ಜವಾಬ್ದಾರಿ ನೀಡಲಾಗಿದೆ.