ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ಇಂದು “76ನೇ ಗಣರಾಜ್ಯೋತ್ಸವ” ದಿನಾಚರಣೆ ಅಂಗವಾಗಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ. ಅಹ್ಮದ್ ಜಲೀಲ್ ಖಾನ್, ಅತಿಥಿ ಉಪನ್ಯಾಸಕರಾದ ಕೃಷ್ಣಪೇಟೆ, ರಮೇಶ್, ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ವಿವಿಧ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.