
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡಕ್ಕೆ(SIT) ಸಹಾಯಕ ತನಿಖಾಧಿಕಾರಿಯನ್ನಾಗಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿತ್ತು.
ವಿಶೇಷ ತನಿಖಾ ತಂಡದ(SIT) ಸಹಾಯಕ ತನಿಖಾಧಿಕಾರಿಯಾಗಿ ಕಾರ್ಯ ಮುಗಿಸಿ ನಿನ್ನೆ (ಫೆ.1) ಪುನಃ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವರದಿ ಮಾಡಿಕೊಂಡಿರುತ್ತಾರೆ.
ಸಿಐಡಿಯ ಎಸ್ಐಟಿ ತಂಡಕ್ಕೆ ತನಿಖಾ ಸಹಾಯಕರಾಗಿ ಪೂರಕ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸ್ ಮಹಾನಿರ್ದೇಶಕರು ಕೋರಿದ್ದರು. ಅದರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಒಡಿ ಆಧಾರದ ಮೇಲೆ ನಿಯೋಜನೆ ಮಾಡಲಾಗಿತ್ತು.
ಇವರು ಈ ಮೊದಲು ಎಚ್ ಎಸ್ ಆರ್ ಲೇಔಟ್ , ಅಶೋಕ ನಗರ, ಪುಲಿಕೇಶಿನಗರ ಮುಂತಾದ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಂದ ಪ್ರಸಂಶ್ನೆಗೆ ಒಳಗಾಗಿರುತ್ತಾರೆ. ಇವರು ಹೊಸಹಳ್ಳಿ ಪೊಲೀಸ್ ಠಾಣೆಗೆ ವಿವಿಧ ಕಂಪನಿಗಳ ಸಿಎಸ್ ಆರ್ ಅನುದಾನ ಅಡಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸುತ್ತಿದ್ದು, ಶೀಘ್ರವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಉದ್ಘಾಟಣೆಗೊಳ್ಳಲಿವೆ.