
ಘಾಟಿ ಸುತ್ತಾಮುತ್ತಾ ಇರುವ ಸರ್ಕಾರಿ ಭೂಮಿಯನ್ನು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡುವುದಿಲ್ಲ. ನನ್ನ ನೇತೃತ್ವದಲ್ಲಿ ಅದು ನಡೆಯುವುದಿಲ್ಲ. ಇತ್ತೀಚೆಗೆ ಡೆವೆಲಪರ್ಸ್ ಈಚೆಗೆ ಬಂದಿದ್ದಾರೆ. ಈ ಭಾಗದಲ್ಲಿ ಜಮೀನುಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಅಲ್ವಾ ಅವರು ಮಾಡಿದ್ದಾರೋ ಅದು ನನಗೆ ಗೊತ್ತಿಲ್ಲ. ಆ ಡೆಲಪರ್ಸ್ ಮಾಡಿದ್ರೆ ಮಾಡಿರುತ್ತಾರೆ ಹೊರೆತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುವುದಿಲ್ಲ. ಒಂದು ವೇಳೆ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಬಡವರಿಗೆ ಜಮೀನು ಕೊಡಬೇಕು. ಫಾರಂ ನಂಬರ್ 53 ಹಾಗೂ 57 ಅರ್ಜಿಗಳನ್ನು ಹಾಕಿಕೊಂಡು ಸರ್ಕಾರಿ ಗೋಮಾಳದಲ್ಲಿ ರೈತರು ಉಳುಮೆ ಮಾಡುತ್ತಾ ಇರುತ್ತಾರೋ ಅಂತಹವರಿಗೆ ಜಮೀನು ಕೊಡಬೇಕಾಗುತ್ತದೆ ಎಂದು ಹೇಳುತ್ತಾ… ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಮರ್ಥಿಸಿಕೊಂಡರು.