ನೆಲಮಂಗಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲಿ ಧಗಧಗನೆ ಉರಿದಿದೆ. ಘಟನೆ ನೆಲಮಂಗಲದ ಮಾದವಾರದ ಬಳಿಯ ನೈಸ್ ರೋಡ್ ನಿಂದ ನೆಲಮಂಗಲ ಕಡೆ ಬರುವ ಮಾರ್ಗದಲ್ಲಿ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ನೋಡ ನೋಡುತ್ತಲೇ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮದುವೆಗೆ ಬರುತ್ತಿದ್ದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಏಳು ಮಂದಿ ಕಾರಿನಿಂದ ಇಳಿದು ಭಾರೀ ಅನಾಹುತದಿಂದ ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿನಂದಿಸುವ ಕಾರ್ಯ ನಡೆಸಿದ್ದಾರೆ.
ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.