ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್‌ ಗೆಹಲೋಟ್ ಅಂಕಿತ: ಗೆಜೆಟ್‌ ಹೊರಡಿಸಿದ ರಾಜ್ಯ ಸರ್ಕಾರ

ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್‌ ಗೆಹಲೋಟ್ ಸಹಿ ಹಾಕಿದ ಹಿನ್ನೆಲೆ ರಾಜ್ಯ ಸರ್ಕಾರ ಗೆಜೆಟ್‌ ಹೊರಡಿಸಿದೆ. ಈ ಹಿನ್ನೆಲೆ, ಈ ಸುಗ್ರೀವಾಜ್ಞೆ ಜಾರಿಗೆ ಬಂದಂತಾಗಿದೆ.

ರಾಜ್ಯಪಾಲರ ಸಲಹೆಗಳು

* ಈ ಸುಗ್ರೀವಾಜ್ಞೆಯನ್ನು ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡು ಆರ್‌ಬಿಐ ನೋಂದಾಯಿತ ಮತ್ತು ನಿಯಂತ್ರಿತ ಹಣಕಾಸು ಸಂಸ್ಥೆಗಳಿಗೆ ಕಿರುಕುಳ ನೀಡಬಾರದು

* ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಅಂತಹ ಸಾಲದಾತರು ನೀಡಿದ್ದ ಸಾಲವನ್ನು ಮರಳಿ ಪಡೆಯಲು ಯಾವುದೇ ಪರಿಹಾರ ಸುಗ್ರೀವಾಜ್ಞೆಯಲ್ಲಿ ಇಲ್ಲ. ಇದು ಕಾನೂನು ಹೋರಾಟಕ್ಕೆ ಕಾರಣ ಆಗಬಹುದು

* ಸಹಜ ನ್ಯಾಯದ ಭಾಗವಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕು ಮತ್ತು ಕಾನೂನು ಪರಿಹಾರಕ್ಕೆ ಹೋರಾಟ ನಡೆಸುವ ಅವಕಾಶವಿದೆ. ಯಾರೇ ಆದರೂ ಹೋರಾಟ ನಡೆಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣ ಆಗಬಹುದು. ರಾಜ್ಯ ಸರ್ಕಾರ ಈ ಕುರಿತು ಮರುಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು

* ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು.

Leave a Reply

Your email address will not be published. Required fields are marked *