ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಹಾದು ಹೋಗಿರುವ ಯಲಹಂಕ ಹಾಗೂ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಪೆಟ್ರೋಲ್, ಡಿಸೇಲ್ ಸಾಗಾಟ ಮಾಡುವ ಲಾರಿ ನಡುವೆ ಭೀಕರ ಅಪಘಾತ ಸಂಭಿಸಿದೆ.
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರನ್ನು ಕೊಣನಕುಂಟೆಯ ವಸಂತ್, ಆವಲಹಳ್ಳಿಯ ಚೇತನ್ ಎಂದು ಗುರುತಿಸಲಾಗಿದೆ. ಕಿರಣ್ ಗಾಯಗೊಂಡವರು.
ಗೌರಿಬಿದನೂರು ಕಡೆಯಿಂದ ಕಾರಿನಲ್ಲಿ ನಾಲ್ಕು ಜನ ಇದ್ದರು. ಕಾರಿಗೆ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಕಾರಿನ ಚಾಲಕ ಹಾಗೂ ಹಿಂಬದಿ ಕುಳಿದ್ದ ಮತ್ತೊಬ್ಬ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.