
ಸರಣಿ ಅಪಘಾತವೊಂದರಲ್ಲಿ ನಾಲ್ಕು ಕಾರುಗಳು ಜಖಂಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಟೋಲ್ ಪ್ಲಾಜಾ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ರಬ್ಬಸಕ್ಕೆ ಕಾರುಗಳು ನಜ್ಜುಗುಜ್ಜಾಗಿವೆ.

ದೊಡ್ಡಬಳ್ಳಾಪುರ-ಹೊಸಕೋಟೆ ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾದ ಬಳಿ ಅಪಘಾತ ಸಂಭವಿಸಿದ್ದು ಟೋಲ್ ಪಾವತಿಸಲು ಸರತಿ ಸಾಲಿನಲ್ಲಿ ಕಾಯುತ್ತಿದ್ದ ಕಾರೊಂದಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಗುದ್ದಿದೆ. ಟ್ರಕ್ಕ್ ನಿಂದ ಗುದ್ದಿಸಿಕೊಂಡ ಕಾರು ತನ್ನ ಮುಂದಿನ ಕಾರಿಗೆ, ಅದು ತಮ್ಮ ಮುಂಭಾದ ಕಾರಿಗೆ ಹೀಗೆ…..4 ಕಾರುಗಳು ಡಿಕ್ಕಿ ಹೊಡೆದುಕೊಂಡು ಜಖಂಗೊಂಡಿವೆ.

ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.