
ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಪಲ್ಟಿ ಹಿನ್ನೆಲೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.