ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ರಾಮೇಶ್ವರ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಲಭಾಗದ ಡಿವೈಡರ್ ದಾಟಿ ದಾಬಸ್ ಪೇಟಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಕಂಟೈನರ್ ಗೆ ಡಿಕ್ಕಿಹೊಡೆದಿದೆ ಎಂದು ಮಾಹಿತಿ ತಿಳಿದುಬಂದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬೆಳವಂಗಲ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರೀಶಲನೆ ನಡೆಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…