ರಾಗಿ ಖರೀದಿ ಕೇಂದ್ರ ಉದ್ಘಾಟನೆ: ರಾಗಿ ಖರೀದಿ ಪ್ರಕ್ರಿಯೆಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ

2024-25ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ದೊಡ್ಡಬಳ್ಳಾಪುರದ ಎಪಿಎಂಸಿ ವಾರ್ಡ್‌ನಲ್ಲಿರುವ ರೈತ ಭವನದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದ್ದು, ಇಂದು ಆ ಕೇಂದ್ರವನ್ನು ಉದ್ಘಾಟಿಸಿ, ರಾಗಿ ಖರೀದಿಸುವ ಪ್ರಕ್ರಿಯೆಗೆ  ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.

ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435) ಇವರನ್ನು ಸಂಪರ್ಗಿಸಬಹುದಾಗಿದೆ.

ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಆನಂದ್ ಮೂರ್ತಿ, ಮಾಜಿ ಅಧ್ಯಕ್ಷ ರಾಜಘಟ್ಟ ನರಸಿಂಹಮೂರ್ತಿ ಹಾಗೂ ರೈತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!