ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹಲವು ಕೊಡುಗೆ

1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.

4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.

5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.

6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.

Leave a Reply

Your email address will not be published. Required fields are marked *

error: Content is protected !!