ಬೆಂಗಳೂರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ಡಾ.ನವೀನ್ ಕುಮಾರ್ ಎಂ.ಬಿ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸ್ಥಾನದಿಂದ ವರ್ಗಾವಣೆಗೊಂಡು ಸ್ಥಳ ನಿರೀಕ್ಷಣೆಯಲ್ಲಿದ್ದರು. ಇದೀಗ ಬೆಂಗಳೂರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ಬೆಂಗಳೂರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಧುಸೂದನ್.ಆರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.