ಇಂದು ಬೆಳ್ಳಂಬೆಳಗ್ಗೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಭೇಟಿ ಕೊಟ್ಟಿದ್ದಾರೆ.
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆಯುದಕ್ಕಷ್ಟೇ ಬಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ಕೊಟ್ಟು ಅಲ್ಲಿನ ಬೇಜವ್ದಾರಿ ಅಧಿಕಾರಿಗಳಿಗೆ ಚಳಿ ಬಿಡಿಸಿ ಹೋಗಿದ್ದರು.
ಇದೀಗ ಇಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದು, ದೇವರಿಗೆ ಅಭಿಷೇಕ ಮಾಡಿಸಿ, ಮಹಾಮಂಗಳಾರತಿ ಪಡೆದಿದ್ದಾರೆ.
ಈ ವೇಳೆ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.