ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಅಥವಾ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
I would like to apply this Job.
Good results