ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ: ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ ಬಿಜೆಪಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಈ ಹಿನ್ನೆಲೆ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್‌ ಖಚಿತಪಡಿಸಿದ್ದಾರೆ

ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.

Leave a Reply

Your email address will not be published. Required fields are marked *