Ugadi Festival: ಜೂಜು, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳಿಗೆ ನಿಷೇಧ- ಕಾನೂನಿನ ಎಲ್ಲೆ ಮೀರಿದರೆ ಕಠಿಣ‌ ಕ್ರಮ- ಬೆಂ.ಗ್ರಾ ಜಿಲ್ಲಾ ಪೊಲೀಸ್ ಅಧೀಕ್ಷಕ  ಸಿ.ಕೆ ಬಾಬಾ ಖಡಕ್ ಎಚ್ಚರಿಕೆ

ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್‌, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್‌ ನಿರ್ಮಿಸಿ ಜೂಜು, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಖಡಕ್ ಎಚ್ಚರಿಕೆ ಕೊಟ್ಟರು.

ರಂಜಾನ್ ಹಬ್ಬ, ಯುಗಾದಿ ಹಬ್ಬ ಮತ್ತು ಶ್ರೀರಾಮ ಶೋಭಾ ಯಾತ್ರೆ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೋಸ್ ವತಿಯಿಂದ ಜಿಲ್ಲಾ ಮಟ್ಟದ ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು, ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸೂಚನೆ ನೀಡಿದರು.

ಯುಗಾದಿ, ರಂಜಾನ್, ಶ್ರೀರಾಮ ನಮವಿ ಹಬ್ಬಗಳನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಬೇಕು. ಆ ಮೂಲಕ ಎಲ್ಲರೂ ಸಾಮರಸ್ಯ ಮೆರೆಯಬೇಕು. ಯಾರಾದರೂ ಶಾಂತಿ- ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ಎಎಸ್ಪಿ ನಾಗೇಶ್ ಕುಮಾರ್, ಡಿವೈಎಸ್ಪಿ‌ ರವಿ.ಪಿ, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ ಸೇರಿದಂತೆ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬೆಳವಂಗಲ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಕಲ್ಲಪ್ಪ ಶಂಕರಪ್ಪ ಖರಾತ್ , ಹೊಸಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್,‌ ಮಹಿಳಾ ಠಾಣೆ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಸೇರಿದಂತೆ ಡಿವೈಎಸ್ ಪಿ ವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *