ಯುಗಾದಿ ಹಬ್ಬದಂದೇ ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನ ಕೊಲೆ: ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳಿಂದ ಹತ್ಯೆ

ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹೆಂಡ್ತಿ, ಮಕ್ಕಳಿದ್ದಾರೆ ಒಳ್ಳೆಯವರಾಗಿ ಬದುಕಿ ಎಂದು ಪೊಲೀಸರು ಕರೆದು ಬುದ್ಧಿ ಹೇಳಿದ್ದರು. ಸ್ನೇಹಿತರು, ಆಪ್ತರು ಕರೆದರೂ ಅಂತಾ ಹೋದರೆ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತೀರಾ ಅನ್ನೋ ಎಚ್ಚರಿಕೆ ಕೂಡ ಕೊಟ್ಟಿದ್ದರು. ಪೊಲೀಸರು ಎಷ್ಟೇ ಬುದ್ಧಿವಾದ ಹೇಳಿದರೂ ಬುದ್ಧಿ ಕಲಿಯದ ರೌಡಿಶೀಟರ್​ ಇದೀಗ ಹಾದಿಬೀದಿಯಲ್ಲಿ ಹೆಣವಾಗಿ ಹೋಗಿದ್ದಾನೆ.

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಈ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್​​ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರು ಕರೆದರೂ ಎಂದು ಕುಣಿಗಲ್​ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ 2 ಬೈಕ್​ನಲ್ಲಿ ಬಂದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಲೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!