ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಇಇ ವಿನಯ್ ಕುಮಾರ್ ಅವರು ಕೋರಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F08-Town ಫೀಡರ್ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, F08-Town ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ಕುಚ್ಚಪ್ಪನಪೇಟೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಕನಕದಾಸ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.