ಪಿಎಲ್ ಡಿ ಬ್ಯಾಂಕ್ ನ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ ರವರ ಕಿರಿಯ ಪುತ್ರ ಸುನೀಲ್ ಅವರ ಅಕಾಲಿಕ ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಸುನೀಲ್ ಅವರ ಅಕಾಲಿಕ ಮರಣಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ವಿಷಾಧ ವ್ಯಕ್ತಪಡಿಸಿ ಕಂಬನಿ ಮಿಡಿದಿದ್ದಾರೆ. ದೇವರು ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.
ನಾಳೆ ನಡೆಯಬೇಕಿದ್ದ ಬಿಜೆಪಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಬೆಂ.ಗ್ರಾಂ. ಜಿಲ್ಲಾ ಪ್ರಧಾನಕಾರ್ಯರ್ಶಿ ತಿಳಿಸಿದ್ದಾರೆ.
ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿ ವೆಂಕಟೇಶ್, ತಾಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ನಗರಸಭಾ ಸದಸ್ಯರು, ಬಿಜೆಪಿಯ ಹಿರಿಯ ಮುಖಂಡರುಗಳು ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.