ಶಾಲೆಗಳಲ್ಲಿನ ಶೌಚಾಲಯ ಸ್ವಚ್ಛತೆಯಲ್ಲಿ ಮಕ್ಕಳ ಬಳಕೆಗೆ ನಿಷೇಧ: ಒಂದು ವೇಳೆ ಬಳಸಿಕೊಂಡರೆ ಬೀಳುತ್ತೆ ಕೇಸ್

ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಚಗೊಳಿಸುವಂತಹ ಶಿಕ್ಷಕರ ಅಮಾನವೀಯ ವರ್ತನೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್‌ಐಆ‌ರ್ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಬಳಸಿಕೊಳ್ಳಬಾರದು ಎಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *