ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.