ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದ ಸಂಜನಾ ಬಾಯಿ

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಇಂದು (ಏ.8) ಪ್ರಕಟವಾಗಿದೆ.

https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

7.13 ಲಕ್ಷ ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ 1 ರಿಸಲ್ಟ್‌ ಇಂದು ಬಿಡುಗಡೆ ಆಗಿದೆ. ಪರೀಕ್ಷೆ ಬರೆದವರು ತಮ್ಮ ರಿಜಿಸ್ಟರ್ ನಂಬರ್ ಮೂಲಕ ಕೆಎಸ್‌ಇಎಬಿ ನೀಡುವ https://karresults.nic.in ಜಾಲತಾಣದಲ್ಲಿ ಫಲಿತಾಂಶ ಚೆಕ್‌ ಮಾಡಿಕೊಳ್ಳಬಹುದು.

ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಉಡುಪಿ (93.90)ಟಾಪರ್, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ, ಯಾದಗಿರಿಗೆ ಕೊನೆಯ ಸ್ಥಾನ ಶೇ.73.45.

ರಾಜ್ಯದಲ್ಲಿ ಒಟ್ಟು ಶೇಕಡ 73.45ರಷ್ಟು ಉತ್ತೀರ್ಣರಾದ ವಿದ್ಯಾರ್ಥಿಗಳು

ಕಲಾ ಸಂಯೋಜನೆಯಲ್ಲಿ ಶೇಕಡ.53.29 ಫಲಿತಾಂಶ, ವಾಣಿಜ್ಯ ಸಂಯೋಜನೆಯಲ್ಲಿ ಶೇಕಡ.76.07, ವಿಜ್ಞಾನ ಸಂಯೋಜನೆಯಲ್ಲಿ ಶೇಕಡ.82.54 ಫಲಿತಾಂಶ ಬಂದಿದೆ.

ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಒಟ್ಟಾರೆ 1,99,227 ಬಾಲಕರು, 2,69,212 ಬಾಲಕಿಯರು ತೇರ್ಗಡೆ ಆಗಿದ್ದಾರೆ.

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್​ ಆಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

Leave a Reply

Your email address will not be published. Required fields are marked *