ವಿದ್ಯುತ್ ಪರಿವರ್ತಕದಲ್ಲಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೆಪಿಟಿಸಿಎಲ್ ಕಚೇರಿ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನಡೆದಿದೆ.
ವಿದ್ಯುತ್ ಪ್ರಸರಣದಿಂದ ವ್ಯಕ್ತಿಯ ದೇಹ ಸುಟ್ಟು ಕರಕಲಾಗಿದೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದಿದೆ. ಮೃತನ ಹೆಸರು, ವಯಸ್ಸು, ವಿಳಾಸ ಸದ್ಯ ತಿಳಿದುಬಂದಿರುವುದಿಲ್ಲ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…