ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ-ಬೆಲೆ ಏರಿಕೆ ವಿರುದ್ಧ ನಾಳೆ(ಏ.17) ಪ್ರತಿಭಟನೆ-ಮಾಜಿ ಶಾಸಕ ಟಿ.ವೆಂಕಟರಮಣಯ್ಯ

ಕಾರ್ಮಿಕರು, ರೈತರು, ಬಡವರು, ವಿದ್ಯಾವಂತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ ಎಂದು ದೊಡ್ಡಬಳ್ಳಾಪುರ ವಿಧಾನ‌ಸಭಾ ಕ್ಷೇತ್ರದ‌ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಾಳೆ(ಏ.17) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ಪ್ರಶ್ನಿಸಿದರು.

ಪ್ರತಿಭಟನೆಗೆ ತಾಲೂಕಿನಿಂದ ಸುಮಾರು 60‌‌ ಬಸ್ ಗಳು ಹೊರಡಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ‌ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.

ಈ ವೇಳೆ ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಭೂ ನ್ಯಾಯ ಮಂಡಳಿ ಸದಸ್ಯ ಆದಿತ್ಯಾ ನಾಗೇಶ್, ಅಂಜನಮೂರ್ತಿ, ಚುಂಚೇಗೌಡ, ಮಮತಾ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *