ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿಎಆರ್( ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ) ಹೆಡ್ ಕಾನ್‌ಸ್ಟೆಬಲ್ ಜಿ.ಎಂ.ವಿವೇಕಾನಂದ ಅವರು ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ.
112 ತುರ್ತು ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ತಾಲೂಕಿನ ಅರೆಹಳ್ಳಿ ಗುಡ್ಡದಹಳ್ಳಿ ನಿವಾಸಿಯಾಗಿರುವ ವಿವೇಕಾನಂದ ಅವರು, ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ಸ್ವಗ್ರಾಮದಲ್ಲಿ ನಡೆಯಲಿದೆ.